ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್‌ಇಎಬಿ) ದ್ವಿತೀಯ ಪಿಯು ಕಾಲೇಜುಗಳಿಗೆ ಹೊಸ ಸೂಚನೆ ನೀಡಿದೆ. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿರುವ ವಿದ್ಯಾರ್ಥಿಗಳ ಬಗ್ಗೆ ಕೂಡಲೇ ಮಂಡಳಿಗೆ ಮಾಹಿತಿ ನೀಡುವಂತೆ ಆದೇಶಿಸಲಾಗಿದೆ.
ಇನ್ಸ್ಟಿಟ್ಯೂಟ್ ಆಫ್ ಕಂಪೆನಿ ಸೆಕ್ರೇಟರೀಸ್ ಇನ್ ಇಂಡಿಯಾ ಅವರು ನಡೆಸಿದ ಸಿ.ಎಸ್.ಇ.ಇ.ಟಿ(ಕಂಪೆನಿ ಸೆಕ್ರೇಟರಿ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್)ಪರೀಕ್ಷೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು, ಸಾಧಕ 28 ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.
ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನದ ದೇವರಬೆಟ್ಟು ಆವರಣದ ಹೊರಗಡೆ ಇರುವ ಕಾಣಿಕೆ ಡಬ್ಬಿಯನ್ನು ಮುರಿದು ಅದರಲ್ಲಿದ್ದ ಹಣ ಕಳವು ಮಾಡಿರುವ ಘಟನೆ ಎ.19 ರಂದು ಸಂಜೆ ನಡೆದಿದೆ.
ಬಜೆಟ್ ಅಧಿವೇಶನದ ಕೊನೆಯ ದಿನ ಅಮಾನತುಗೊಳಗಾದ 18 ಶಾಸಕರ ವಿರುದ್ಧದ ಆದೇಶ ಹಿಂಪಡೆಯುವಂತೆ ಆಗ್ರಹಿಸಿ, ಬಿಜೆಪಿ ನಿಯೋಗ ಸ್ಪೀಕರ್ ಯು.ಟಿ. ಖಾದರ್ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದೆ.