ವಿಶ್ವದಾದ್ಯಂತ ಯೇಸು ಕ್ರಿಸ್ತನ ಜನ್ಮದಿನವಾದ 'ಕ್ರಿಸ್‌ಮಸ್' ಹಬ್ಬವನ್ನು ಸಡಗರದಿಂದ ಆಚರಿಸಲಾಗುತ್ತಿದ್ದು, ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ನವದೆಹಲಿಯ ಪ್ರತಿಷ್ಠಿತ 'ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್'ಗೆ ಭೇಟಿ ನೀಡಿ ವಿಶೇಷ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ ವಿರುದ್ಧ ಹಕ್ಕುಚ್ಯುತಿ ಆರೋಪ ಮಾಡಿರುವ ಮಹಾರಾಷ್ಟ್ರದ ಸಂಸದ ಧೈರ್ಯಶೀಲ ಮಾನೆ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಘೋಷಿಸಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ.), ಕಾರ್ಕಳ ತಾಲೂಕಿನ ಕಾರ್ಕಳ ನಗರ ವಲಯದ ವತಿಯಿಂದ ಪೆರ್ವಾಜೆ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ "ಸ್ವಾಸ್ತ್ಯ ಸಂಕಲ್ಪ" ಎಂಬ ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.