ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಜನಪ್ರಿಯ ನಟ ಪವನ್ ಕಲ್ಯಾಣ್ ಅವರ ಪತ್ನಿ ಅನ್ನಾ ಲೆಜ್ಜೆವಾ ಭಾನುವಾರ ರಾತ್ರಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ, ಪುತ್ರನ ಚೇತರಿಕೆಗೆ ಹೊತ್ತಿದ್ದ ಹರಕೆಯಂತೆ ಮುಡಿಕೊಟ್ಟು ಹರಕೆ ತೀರಿಸಿಕೊಂಡರು.
ಬುಧವಾರ ಬೆಳಗಿನ ಜಾವ ಅಫ್ಘಾನಿಸ್ತಾನದ ಹಿಂದೂ ಕುಶ್ ಪರ್ವತಶ್ರೇಣಿಯಲ್ಲಿ ಸಂಭವಿಸಿದ 5.9 ತೀವ್ರತೆಯ ಭೂಕಂಪದ ಪರಿಣಾಮ, ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
ಬೀಡಿ & ಟೋಬ್ಯಾಕೋ ಲೇಬರ್ ಯೂನಿಯನ್ ನೇತ್ರತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಉಡುಪಿ ತಹಶಿಲ್ದಾರರ ಕಛೇರಿ ಎದುರು ಸರ್ಕಾರದ ಆದೇಶ ಪ್ರತಿಗೆ ಬೆಂಕಿ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಲಾಯಿತು.
ಮದುವೆಯ ಹೆಸರಿನಲ್ಲಿ ನೀಡಲಾದ ಭರ್ಜರಿ ಉಡುಗೊರೆಗಳಾದ ಕಾರು, ಬೈಕ್, ಚಿನ್ನಾಭರಣ, ಎಲೆಕ್ಟ್ರಾನಿಕ್ಸ್, ಪೀಠೋಪಕರಣಗಳನ್ನು ಒಂದೇ ಸ್ಥಳದಲ್ಲಿ ಪ್ರದರ್ಶನಗೊಳಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ.