ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ, ಕಮಲಶಿಲೆ ಹಾಗೂ ಹೊಸಂಗಡಿ ಭಾಗಗಳಲ್ಲಿ ಎರಡು ದಿನಗಳ ಕಾಲ ಆತಂಕ ಮೂಡಿಸಿದ್ದ ಒಂಟಿ ಕಾಡಾನೆ ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದು, ಸಕ್ರೆಬೈಲಿಗೆ ಕಳುಹಿಸಲಾಗಿದೆ.
ಸುಮಾರು 15 ವರ್ಷಗಳಿಂದ ಇರ್ವತ್ತೂರು ಕೊಳಕೆ ಶಾಲೆಗೆ ಶಾಲಾ ಹೆಮ್ಮೆಯ ಹಳೆವಿದ್ಯಾರ್ಥಿ ನಿಕಟ ಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ ಎಸ್ ಕೋಟ್ಯಾನ್ ಮತ್ತು ಮುಂಬೈ ಉದ್ಯಮಿ ವಿಠ್ಠಲ ಎಸ್ ಅಮೀನ್ ರವರು ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ಸ್ ಪುಸ್ತಕ ನೀಡುತ್ತಿದ್ದು ,ಈ ಬಾರಿಯೂ ಕೊಡುಗೆ ನೀಡಿ ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿದ್ದಾರೆ.
ಕಾಂಗ್ರೆಸ್ ನಾಯಕರಾಗಿರುವ ಮಾನ್ಯ ಶ್ರೀ ಉದಯ್ ಶೆಟ್ಟಿ ಮುನಿಯಾಲುರವರ ಹುಟ್ಟುಹಬ್ಬದ ಪ್ರಯುಕ್ತ ಆದಿತ್ಯವಾರ ಬೆಳಿಗ್ಗೆ 9:30 ರಿಂದ ಬಂಡೀಮಠ ಮೂಡು ಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ರಕ್ತದಾನ ಶಿಬಿರ, ಆರೋಗ್ಯ ತಪಾಸಣೆ, ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಗಾಜಾ ಪಟ್ಟಣದಲ್ಲಿ, ಆಹಾರ ಸೇರಿದಂತೆ ಮೂಲಭೂತ ಅಗತ್ಯ ವಸ್ತುಗಳ ಲಭ್ಯತೆ ಕುಸಿದಿದೆ. ಈ ಭೀಕರ ಪರಿಸ್ಥಿತಿಯಲ್ಲಿ, ಭಾರತೀಯ ಮಾರುಕಟ್ಟೆಯಲ್ಲಿ ಕೇವಲ ₹5ಕ್ಕೆ ಲಭ್ಯವಿರುವ ಪಾರ್ಲೆ-ಜಿ ಬಿಸ್ಕತ್ ಗಾಜಾದಲ್ಲಿ ₹2,300ಕ್ಕಿಂತಲೂ ಹೆಚ್ಚು ಬೆಲೆಗೆ ಮಾರಾಟವಾಗುತ್ತಿರುವ ವರದಿ ವೈರಲ್ ಆಗಿದೆ.
ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.
ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.