ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳನ್ನು ಸಂಪರ್ಕಿಸುವ ಪ್ರಮುಖ ರೈಲು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್‌ನ್ನು ಓಡಿಸುವ ಅಗತ್ಯವನ್ನು ವಿವರಿಸಿದರು.
ಕರ್ನಾಟಕದಲ್ಲಿ ಏರೋಸ್ಪೇಸ್ ಮತ್ತು ರಕ್ಷಣಾ ವಲಯ ಸೇರಿದಂತೆ ಕೈಗಾರಿಕೆಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮಧ್ಯಮ ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಎಂ.ಬಿ. ಪಾಟೀಲ್ ಅವರು ತಿಳಿಸಿದ್ದಾರೆ.
ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್‌ನ ಪುರುಷರ ಹೈಜಂಪ್ ಸ್ಪರ್ಧೆಯಲ್ಲಿ ಮುದ್ರಾಡಿಯ ಸುದೀಪ್ ಶೆಟ್ಟಿಗಾರ್ ಉಪ್ಪಳ ರವರು ಬಂಗಾರದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಚೊಚ್ಚಲ ಸ್ವರ್ಣ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ಉಡುಪಿಯ ಮೂಡುಬೆಟ್ಟುವಿನಲ್ಲಿರುವ ಶ್ರೀ ಕೃಷ್ಣ ವೃದ್ಧರ ಆಶ್ರಯ ಧಾಮದ ವಯೋವೃದ್ಧರ ಮನಸ್ಸಿಗೆ ಸಂತೋಷ ನೀಡುವ ಹಾಗೂ ಅವರಿಗೆ ನಿತ್ಯ ಭಜನೆ ಮಾಡಲು ಅನುಕೂಲವಾಗುವಂತೆ ಶ್ರೀನಿವಾಸ ಮೂರ್ತಿಯನ್ನು ಆಶ್ರಮವಾಸಿಗಳ ಸಮ್ಮುಖದಲ್ಲಿ ತಂದು ಇರಿಸಲಾಯಿತು..