ಮತ್ತು ಕಾಶ್ಮೀರದ ಪಹಲ್ಯಾಮ್ ಪ್ರದೇಶದಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ–ಪಾಕಿಸ್ತಾನ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಇದರ ಪರಿಣಾಮವಾಗಿ ಬಿಸಿಸಿಐ ಉಳಿದ ಐಪಿಎಲ್ ಪಂದ್ಯಾವಳಿಯನ್ನು ಅಮಾನತುಗೊಳಿಸಿದೆ.
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ)ಗೆ ಹಸ್ತಾಂತರಿಸುವ ಬಗ್ಗೆ ಯಾವುದೇ ವಿರೋಧವಿಲ್ಲ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ತಿಳಿಸಿದ್ದಾರೆ.
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭದ್ರತಾ ಅಲರ್ಟ್ ಘೋಷಿಸಲಾಗಿದ್ದು, ಎಲ್ಲ ಸರ್ಕಾರಿ ನೌಕರರ ರಜೆಗಳನ್ನು ರದ್ದುಗೊಳಿಸಲಾಗಿದೆ.
' ಕಾರ್ಕಳ ಟೈಗರ್ಸ್ ' ಬೋಳ ಪ್ರಶಾಂತ್ ಕಾಮತ್ ಅಭಿಮಾನಿ ಬಳಗ, ಎಸ್ ಆರ್ ಎಜುಕಷನ್ ಟ್ರಸ್ಟ್ (ರಿ ) ಹೆಬ್ರಿ ಮತ್ತು ಜಿ. ಎಸ್. ಬಿ ಯುವಜನ ಸಭಾ ಹೆಬ್ರಿ ಇವರ ಆಶ್ರಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ "ಅಷ್ಟಮಿದ ಕೆಸರ್ದ ಓಕುಳಿ " ಎಂಬ ವಿಭಿನ್ನ ಕಾರ್ಯಕ್ರಮವನ್ನು ಆಗಸ್ಟ್ 24 ರಂದು ಹೆಬ್ರಿಯ ಅರ್ಧ ನಾರೀಶ್ವರ ದೇವಸ್ಥಾನದ ಬಾಕಿ ಮಾರು ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದೆ .
ಹೆರಿಗೆ ಸಮಯದಲ್ಲಿ ವೈದ್ಯರು ಹಣಕ್ಕೆ ಬೇಡಿಕೆಯಿಟ್ಟು ಚಿಕಿತ್ಸೆಯಲ್ಲಿ ವಿಳಂಬ ಮಾಡಿದ್ದರಿಂದ, ನವಜಾತ ಶಿಶು ಮೃತಪಟ್ಟಿದೆ ಎಂದು ಆರೋಪಿಸಿ, ತಂದೆಯೊಬ್ಬರು ಮಗುವಿನ ಮೃತದೇಹವನ್ನು ಚೀಲದಲ್ಲಿ ಇರಿಸಿಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬಂದಿರುವ ಘಟನೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ