ಹಿರಿಯಡಕ ಗ್ರೀನ್ ಪಾರ್ಕ್ ಶಾಲೆಯಲ್ಲಿ ರೋಟರಿ ಪರ್ಕಳ ಇದರ ಪ್ರಾಯೋಜಕತ್ವದಲ್ಲಿ ಇಂಟಲ್ಯಾಕ್ಸ್ ಕ್ಲಬ್ ಪದ ಪ್ರದಾನ ಸಮಾರಂಭವನ್ನು ಪದ ಪ್ರದಾನ ಅಧಿಕಾರಿ ರೊ | PHF ಆತ್ರಾಡಿ ಪೃಥ್ವಿರಾಜ್ ಹೆಗ್ಡೆಯವರು ಕಾಲರ್ ಮತ್ತು ಗ್ಯಾವಲನ್ನು ಇಂಟರಾಕ್ಟ್ ಕ್ಲಬ್ ಅಧ್ಯಕ್ಷೆ ಕು| ಅನುಷಾ ಉಪಾಧ್ಯಾಯ ಅವರಿಗೆ ಹಸ್ತಾಂತರಿಸಿ ಮಾತನಾಡುತ್ತಾ ವಿದ್ಯಾರ್ಥಿ ಜೀವನದಲ್ಲಿಯೇ ಕಲಿಕೆಯೊಂದಿಗೆ ಸೇವಾ ಮನೋಭಾವನೆಯನ್ನು ರೂಢಿಸಿ ಕೊಳ್ಳಬೇಕೆಂದು ಹಿತವಚನ ನೀಡಿದರು.
ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನವಾದ ಆಗಸ್ಟ್ 12 ಅನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ಸೋಮವಾರ ರಕ್ಷಾ ಬಂಧನ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಸಮಾಜದ ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ರಾಖಿ ಕಟ್ಟಿ ಶುಭ ಹಾರೈಸಲಾಯಿತು.