ಕನ್ನಡ ಪರ ಸಂಘಟನೆಗಳು ಶನಿವಾರ (ಮಾರ್ಚ್.22) ರಾಜ್ಯ ಬಂದ್ ಗೆ ಕರೆ ನೀಡಿದ್ದರೂ, ದಕ್ಷಿಣ ಕನ್ನಡ ಬಸ್ ಮಾಲಕರ ಸಂಘ ಮತ್ತು ಕೆನರಾ ಬಸ್ ಮಾಲಕರ ಸಂಘ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಅಜೆಕಾರು ಗ್ರಾಮದ ದೆಪುತ್ತೆಯ ಬಾಲಕೃಷ್ಣ ಪೂಜಾರಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಆಗಿರುವ ಅವರ ಪತ್ನಿ ಪ್ರತಿಮಾ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.
ದಿನಾಂಕ 05-08-2025 ರ ಮಂಗಳವಾರದಂದು ಡಾ.ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮದರ್ಜೆ ಕಾಲೇಜು ನಿಟ್ಟೆ ಇದರ 38ನೇ ವಿದ್ಯಾರ್ಥಿ ಪರಿಷತ್ ಅನ್ನು ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಅಂತರಾಷ್ಟ್ರೀಯ ಸಹಯೋಗಗಳ ನಿರ್ದೇಶಕರಾದ ಪ್ರೋ. ಹರೀಕೃಷ್ಣ ಭಟ್ ಉದ್ಘಾಟಿಸಿದರು.
ಇತ್ತೀಚೆಗೆ ಕನ್ನಡ ಚಿತ್ರರಂಗದಲ್ಲಿ ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರಾಜ್ ಬಿ. ಶೆಟ್ಟಿ ಮತ್ತು ಪ್ರಮೋದ್ ಶೆಟ್ಟಿ ಅವರಂತಹ ಕಲಾವಿದರು ವಿಭಿನ್ನ ಶೈಲಿಯ ಸಿನಿಮಾಗಳ ಮೂಲಕ ದೊಡ್ಡ ಮಟ್ಟದ ಯಶಸ್ಸು ಗಳಿಸಿದ್ದಾರೆ. ಈ ತಂಡವನ್ನು ಕೆಲವರು ‘ಶೆಟ್ಟಿ ಮಾಫಿಯಾ’ ಅಥವಾ ‘ಶೆಟ್ಟಿ ಗ್ಯಾಂಗ್’ ಎಂದು ಕರೆಯುತ್ತಿದ್ದು, ಈ ಬಗ್ಗೆ ನಟ ಮತ್ತು ನಿರ್ದೇಶಕ ರಾಜ್ ಬಿ. ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.