'ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಯಾವಾಗ' ಎಂಬ ಹಿರಿಯ ಪತ್ರಕರ್ತೆ ರಾಧಾ ಹಿರೇಗೌಡರ್ ಪ್ರಶ್ನೆಗೆ 'ನಿಮ್ಮ ಹೆರಿಗೆ ಆದ್ಮೇಲೆ' ಎಂಬ ಉಡಾಫೆ ಉತ್ತರ ನೀಡಿರುವ ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರ ವರ್ತನೆ ಕಾಂಗ್ರೆಸ್ ಪಕ್ಷದ ಕೀಳು ಸಂಸ್ಕೃತಿಯ ಪ್ರತೀಕವಾಗಿದೆ ಎಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕುಕ್ಕುಂದೂರು ಗ್ರಾಮದ ಜೋಡುರಸ್ತೆಯ ಶ್ರೀ ಗಣೇಶ ಮಂಟಪದಲ್ಲಿ ಐದು ದಿನಗಳ ಕಾಲ ನಡೆದ 42ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಾರಂಭದ ಸಮಾರೋಪ ಸಮಾರಂಭ ಕಾರ್ಯಕ್ರಮ ಮತ್ತು ಗಣಪತಿ ವಿಗ್ರಹದ ವಿಸರ್ಜನಾ ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ದಿನಾಂಕ 31-8-2025 ರಂದು ನಡೆಯಿತು.
ಕನ್ನಡ ಚಲನಚಿತ್ರರಂಗದ ಅಪ್ರತಿಮ ನಟರಾದ ಡಾ. ವಿಷ್ಣುವರ್ಧನ್ ಮತ್ತು ಹಿರಿಯ ನಟಿ ಬಿ. ಸರೋಜಾದೇವಿ ಅವರಿಗೆ ಮರಣೋತ್ತರವಾಗಿ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ಸಮೋಸಾ ತರುವ ವಿಷಯದಲ್ಲಿ ಗಂಡ ಮತ್ತು ಹೆಂಡತಿಯ ನಡುವೆ ನಡೆದ ವಾಗ್ವಾದವು ಗಂಭೀರ ಸ್ವರೂಪ ಪಡೆದುಕೊಂಡು, ಪತ್ನಿ ಮತ್ತು ಆಕೆಯ ಕುಟುಂಬ ಸದಸ್ಯರು ಸೇರಿ ಪತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಆನಂದಪುರದಲ್ಲಿ ವರದಿಯಾಗಿದೆ.