ಧರ್ಮಸ್ಥಳದಲ್ಲಿ ತಲೆಬುರುಡೆ ಪತ್ತೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಎಸ್‌ಐಟಿ (ವಿಶೇಷ ತನಿಖಾ ದಳ) ಇದೀಗ ಹೊಸ ದಿಕ್ಕಿನಲ್ಲಿ ಹೆಜ್ಜೆ ಇರಿಸಿದೆ. ಅನಾಥ ಶವಗಳ ಸತ್ಯಾಂಶವನ್ನು ಪತ್ತೆಹಚ್ಚಲು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ಮಹತ್ವದ ವರದಿಯನ್ನು ಕೇಳಿದೆ.
ಜಿಲ್ಲಾ ಜನಜಾಗೃತಿ ವೇದಿಕೆಯ ಪ್ರಥಮ ತ್ರೈಮಾಸಿಕ ಸಭೆಯನ್ನು ಉಡುಪಿ ಅಂಬಲ್ಪಾಡಿ ಪ್ರಗತಿ ಸೌಧ ಸಭಾಂಗಣದಲ್ಲಿ ಜಿಲ್ಲಾ ಜನಜಾಗೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಶೆಟ್ಟಿ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಪೊಲೀಸ್ ಉಪನಿರೀಕ್ಷಕರೊಬ್ಬರ ಫೋಟೋವನ್ನು ಬಳಸಿಕೊಂಡು, ಅವರ ಸಾವಿಗೆ ಮತ್ತು ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್.ಐ.ಟಿ ತನಿಖೆಗೂ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಸಾರ ಮಾಡಿದ ನಾಲ್ಕು ಇನ್‌ಸ್ಟಾಗ್ರಾಮ್ ಖಾತೆಗಳ ವಿರುದ್ಧ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳದ ಅರಣ್ಯದಲ್ಲಿ ಶವಗಳನ್ನು ಹೂತು ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ, ಅನಾಮಿಕ ವ್ಯಕ್ತಿ ಗುರುತಿಸಿದ ಪಾಯಿಂಟ್ ನಂಬರ್ 1ರಲ್ಲಿ ದೊರಕಿದ ಡೆಬಿಟ್ ಮತ್ತು ಪಾನ್ ಕಾರ್ಡ್‌ಗಳ ರಹಸ್ಯವನ್ನು ಎಸ್‌ಐಟಿ ಅಧಿಕಾರಿಗಳು ಭೇದಿಸಿದ್ದಾರೆ.