ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಅವರ ಪ್ರಕಾರ, ಈ ಮೇಳದಿಂದ ರಾಜ್ಯಕ್ಕೆ ಮೂರು ಲಕ್ಷ ಕೋಟಿ ರೂ. ಆದಾಯ ಬರುವ ಸಾಧ್ಯತೆ ಇದೆ. ರಾಜ್ಯದ ಜಿಡಿಪಿ 3.25ರಿಂದ 3.5 ಲಕ್ಷ ಕೋಟಿ ರೂ.ಗೆ ಏರಿಕೆ ಆಗಬಹುದು ಎಂಬ ನಿರೀಕ್ಷೆಯೂ ಇದೆ.
ಮಾಧ್ಯಮಗಳು "ಗೃಹಲಕ್ಷ್ಮಿ ಹಣ ಮೂರು ತಿಂಗಳಿನಿಂದ ಬಂದಿಲ್ಲವೇಕೆ?" ಎಂದು ಸಚಿವ ಕೆ.ಜೆ. ಜಾರ್ಜ್ ಅವರನ್ನು ಪ್ರಶ್ನಿಸಿದಾಗ, "ತಿಂಗಳು ತಿಂಗಳು ಹಾಕಕ್ಕೆ ಅದೇನು ಸಂಬಳನಾ? ಹಾಕ್ತಾರೆ ಬಿಡಿ!" ಎಂದು ನಿರ್ಲಕ್ಷ್ಯ ಭರಿತವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಮಹಿಳೆಯರ ಮೇಲೆ ಪರಿಣಾಮ ಬೀರುವ ಕ್ಯಾನ್ಸರ್ ವಿರುದ್ಧ ಹೋರಾಡಲು ಅಭಿವೃದ್ಧಿಪಡಿಸಿರುವ ಲಸಿಕೆ ಇನ್ನು 5-6 ತಿಂಗಳಲ್ಲಿ ಲಭ್ಯವಾಗಲಿದೆ ಎಂದು ಕೇಂದ್ರ ಸಚಿವ ಪ್ರತಾಪ್‌ರಾವ್ ಜಾಧವ್ ತಿಳಿಸಿದ್ದಾರೆ.
ಕಾರ್ಕಳ ಪುರಸಭಾ ವ್ಯಾಪ್ತಿಯ ರಸ್ತೆಗಳಲ್ಲಿ ಹೊಂಡಗಳೇ ತುಂಬಿದ್ದು ಸಾರ್ವಜನಿಕರ ಸಂಚಾರಕ್ಕೆ ತೊಂದರೆಯಾಗಿದೆ ಪುರಸಭಾ ಆಡಳಿತ ತಕ್ಷಣ ಎಲ್ಲಾ ಹೊಂಡಗಳನ್ನು ಮುಚ್ಚಬೇಕು ಇಲ್ಲವಾದರೆ ಸಾರ್ವಜನಿಕರ ಜೊತೆಗೂಡಿ ಮಾಡುವ ಪ್ರತಿಭಟನೆಯನ್ನು ಎದುರಿಸಬೇಕಾದಿತು ಎಂದು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಜೇಂದ್ರ ದೇವಾಡಿಗ ಪುರಸಭೆಯನ್ನು ಎಚ್ಚರಿಸಿದ್ದಾರೆ.
ಅಮೆರಿಕಾದ ಬೋಸ್ಟನ್‌ನಲ್ಲಿ ರಾಷ್ಟ್ರೀಯ ಶಾಸಕರ ಸಮಾವೇಶ ಸಂಸ್ಥೆಯ (NLC) ಆಶ್ರಯದಲ್ಲಿ ಕರ್ನಾಟಕ ವಿಧಾನಸಭಾ ಅಧ್ಯಕ್ಷರ (ಸ್ಪೀಕರ್) ನೇತೃತ್ವದಲ್ಲಿ ನಡೆಯಲಿರುವ ಅಂತರರಾಷ್ಟ್ರೀಯ ಮಟ್ಟದ ವಿಧಾಯಕರುಗಳ ಸಮ್ಮೇಳನಕ್ಕೆ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಬೈಲೂರಿನ ಉಮಿಕ್ಕಲ್ ಬೆಟ್ಟದ ಮೇಲೆ ನಿರ್ಮಾಣವಾಗುತ್ತಿದ್ದ ಐತಿಹಾಸಿಕ ಪರಶುರಾಮ ಥೀಮ್ ಪಾರ್ಕ್‌ನ ಕಾಮಗಾರಿಯು ಸ್ಥಗಿತಗೊಂಡಿರುವ ಕುರಿತು ಜಿ.ಪಂ. ಮಾಜಿ ಸದಸ್ಯ ಸುಮಿತ್ ಶೆಟ್ಟಿ ಕೌಡೂರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.