ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಗ್ರಾಮದಲ್ಲಿ 2016ರ ಜನವರಿಯಲ್ಲಿ ನಡೆದ ವೃದ್ಧ ದಂಪತಿಯ ಕೊಲೆ ಮತ್ತು ಸುಲಿಗೆ ಪ್ರಕರಣದಲ್ಲಿ ಆರೋಪಿಯಾದ ರಾಜು ಕಲವಡ್ಕರ್ (ರಾಜೇಶ್)ನಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಪ್ರೀತಿ ಕೆ.ಪಿ. ಅವರು ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ.
ಯಕ್ಷಗಾನ ಪ್ರದರ್ಶನಕ್ಕೆ ಕಾನೂನಿನ ಆತಂಕ ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಎಲ್ಲಾ ಮೇಳಗಳಿಗೆ ಏಕಕಾಲದಲ್ಲಿ ಅನುಮತಿ ನೀಡಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಶಾಸಕ ವಿ. ಸುನೀಲ್ ಕುಮಾರ್ ಹೇಳಿದರು.
ಸಾಮಾನ್ಯವಾಗಿ ಡ್ರೈವಿಂಗ್ ಲೈಸೆನ್ಸ್, ಪಾಸ್‌ಪೋರ್ಟ್‌ನಂತಹ ಗುರುತಿನ ಚೀಟಿಗಳಿಗೆ ನಿರ್ದಿಷ್ಟ ಅವಧಿ ಇರುತ್ತದೆ. ಆದರೆ, ಬಹುತೇಕರಿಗೆ ಆಧಾರ್ ಕಾರ್ಡ್‌ಗೆ ಎಕ್ಸ್‌ಪೈರಿ ದಿನಾಂಕದ ಬಗ್ಗೆ ಗೊಂದಲವಿದೆ.
ಪಾಕಿಸ್ತಾನದೊಂದಿಗಿನ ಭಾರತದ ಸಂಬಂಧಗಳ ಕುರಿತು ಅಮೆರಿಕಾದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಇತ್ತೀಚಿನ ಹೇಳಿಕೆಗಳ ಹಿನ್ನೆಲೆಯಲ್ಲಿ, ಭಾರತದ ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರು ದೇಶದ ಸಾರ್ವಭೌಮತ್ವ ಮತ್ತು ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಿಕೆಯ ಬಗ್ಗೆ ಬಲವಾದ ಸಂದೇಶವನ್ನು ರವಾನಿಸಿದ್ದಾರೆ
ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಧರ್ಮಸ್ಥಳ ಗ್ರಾಮದಲ್ಲಿ ಪತ್ತೆಯಾಗಿರುವ ಶವಗಳ ಕುರಿತ ಪ್ರಕರಣದ ತನಿಖೆಯನ್ನು ನಡೆಸಲು ರಾಜ್ಯ ಸರ್ಕಾರವು ಇದೀಗ ವಿಶೇಷ ತನಿಖಾ ತಂಡ (S.I.T.) ಒಂದನ್ನು ರಚಿಸಿದೆ.