ಸಭೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮದ ವಿವರ ನೀಡಿದರು. ಸಂವಿಧಾನದ ಬಗ್ಗೆ ಜನರಲ್ಲಿರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸಿ ಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು
ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರದ (ಕಾರ್ನಿಕ್) ನಿರ್ದೇಶಕ ಡಾ. ನಾರಾಯಣ ಗೌಡ ಕಾರ್ಕಳದ ಬೈಲೂರು ಪ್ರದೇಶದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಿಸಿದಂತೆ ಪ್ರಸ್ತುತ ಬೆಳವಣಿಗೆಗಳನ್ನು ಪರಿಶೀಲಿಸಲು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಈ ಯೋಜನೆಯಡಿ ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಏಳು ದಿನಗಳ ಕಾಲ ಸಂತ್ರಸ್ತರ ಚಿಕಿತ್ಸೆಗೆ ಗರಿಷ್ಠ ₹1.5 ಲಕ್ಷ ವೆಚ್ಚ ಭರಿಸುವುದಾಗಿ ಸರ್ಕಾರ ಘೋಷಿಸಿದೆ.
2008ರ ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿ ಮಾಜಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಲ್ಲಾ 7 ಆರೋಪಿಗಳನ್ನು ಮುಂಬೈನ ವಿಶೇಷ ಎನ್‌ಐಎ ನ್ಯಾಯಾಲಯವು ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಜಿಲ್ಲೆಯ ಸಂತೆಕಟ್ಟೆ ಜಂಕ್ಷನ್‌ನಲ್ಲಿ ಜುಲೈ 31ರ ಗುರುವಾರ ಬೆಳಗ್ಗೆ ಸಂಭವಿಸಿದ ಸರಣಿ ಅಪಘಾತದ ಹಿನ್ನೆಲೆಯಲ್ಲಿ ಈ ಪ್ರದೇಶದ ಸಂಚಾರ ವ್ಯವಸ್ಥೆಯ ದುರ್ಬಲತೆ ಮತ್ತೆ ಮುನ್ನೆಲೆಗೆ ಬಂದಿದೆ.