ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಹತ್ತಿರ ಇರುವ ಈಜು ಕೊಳದಲ್ಲಿ ಜನವರಿ 12 ಆದಿತ್ಯವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಏರ್ಪಡಿಸಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ಇದ್ದು ಬೆಳಿಗ್ಗೆ 9.00 ಗೆ ಗಣ್ಯರಿಂದ ಉದ್ಘಾಟನೆ ಆಗಲಿದೆ.
ಗೋ ಸೇವಾ ಗತಿವಿಧಿ, ಕರ್ನಾಟಕ ರಾಧಾ ಸುರಭಿ ಗೋಮಂದಿರ ಮತ್ತು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.) ಸಹಯೋಗದಲ್ಲಿ ನಂದಿ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಜನವರಿ 10ರಂದು ಸಂಜೆ 5 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರು ಹಾವೇರಿಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಪರವಾಗಿ ಪ್ರಬಲವಾಗಿ ಮಾತನಾಡಿದರು.