ವೀ ಒನ್ ಅಕ್ವ ಸೆಂಟರ್ ಕೋಟಿ ಚೆನ್ನಯ್ಯ ಥೀಮ್ ಪಾರ್ಕ್ ಕಾರ್ಕಳ ಇದರ ಹತ್ತಿರ ಇರುವ ಈಜು ಕೊಳದಲ್ಲಿ ಜನವರಿ 12 ಆದಿತ್ಯವಾರದಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಏರ್ಪಡಿಸಿದ್ದು ಬೇರೆ ಬೇರೆ ರೀತಿಯ ಸ್ಪರ್ಧೆಗಳು ಇದ್ದು ಬೆಳಿಗ್ಗೆ 9.00 ಗೆ ಗಣ್ಯರಿಂದ ಉದ್ಘಾಟನೆ ಆಗಲಿದೆ.
ಗೋ ಸೇವಾ ಗತಿವಿಧಿ, ಕರ್ನಾಟಕ ರಾಧಾ ಸುರಭಿ ಗೋಮಂದಿರ ಮತ್ತು ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ (ರಿ.) ಸಹಯೋಗದಲ್ಲಿ ನಂದಿ ರಥಯಾತ್ರೆ ಹಾಗೂ ಸಭಾ ಕಾರ್ಯಕ್ರಮ ಜನವರಿ 10ರಂದು ಸಂಜೆ 5 ಗಂಟೆಗೆ ಕಾರ್ಕಳದ ಮಂಜುನಾಥ ಪೈ ಸಭಾಭವನದಲ್ಲಿ ನಡೆಯಲಿದೆ.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿಗೆ ಸ್ವಾತಂತ್ರ್ಯ ದಿನಾಚರಣೆಯ ದಿನದಂದು ಮುಖ್ಯ ಅತಿಥಿಗಳಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ, ಭಾರತೀಯ ಬಾಹ್ಯಾಕಾಶ ವಿಜ್ಞಾನಿ ಮತ್ತು ಇಸ್ರೋ ಮಾಜಿ ಅಧ್ಯಕ್ಷರಾದ ಎ.ಎಸ್ ಕಿರಣ್ ಕುಮಾರ್ ರವರು ಆಗಮಿಸಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಿದ್ದಾರೆ.
ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ ಕಾರ್ಕಳದ ರೋಟರಿ ಕ್ಲಬ್, ಆನ್ಸ್ ಕ್ಲಬ್ ಹಾಗೂ ಕಾಲೇಜಿನ ಎನ್.ಎಸ್.ಎಸ್ ಮತ್ತು ಎನ್.ಸಿ.ಸಿ ಘಟಕದ ವತಿಯಿಂದ ನಡೆದ ಮಕ್ಕಳು ಎದುರಿಸುತ್ತಿರುವ ಮನೋಸಮಸ್ಯೆಗಳ ಕುರಿತ ಕಾರ್ಯಕ್ರಮದಲ್ಲಿ ಹಿಪ್ನೋ ಥೆರಪಿಸ್ಟ್ ಶ್ರೀಮತಿ ಜ್ಯೋತಿ ಮಹಾದೇವ್ ಮಾತನಾಡಿದರು.