ಉಳ್ಳಾಲ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ತುರ್ತು ಸಭೆ ನಡೆಸಿದ್ದು, ಶೀಘ್ರವೇ ಆರೋಪಿಗಳ ಪತ್ತೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಏಳು ತಿಂಗಳಿಗೂ ಹೆಚ್ಚು ಕಾಲ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿದ್ದ ಭಾರತೀಯ ಮೂಲದ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ತಮ್ಮ ಎಂಟನೇ ಬಾಹ್ಯಾಕಾಶ ನಡಿಗೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಕಲಿಕೆಯಲ್ಲಿ ಆಸಕ್ತಿ ಮತ್ತು ನಿರಂತರತೆಯನ್ನು ಕಾಯ್ದುಕೊಳ್ಳುವಲ್ಲಿ ಪ್ರಾರಂಭವಾದ ಸಂಸ್ಥೆಯ ನೂತನ ಪರಿಕಲ್ಪನೆಯಾದ ಸ್ಫೂರ್ತಿ ಮಾತು-11 ಸರಣಿ ಕಾರ್ಯಕ್ರಮವು 'ನಿಮಗೆ ನೀವೇ ಕನ್ನಡಿಯಾಗಿ' ಎಂಬ ಶೀರ್ಷಿಕೆಯಡಿಯಲ್ಲಿ ಜರುಗಿತು.
ದಕ್ಷಿಣ ಗಾಜಾದ ಮುಖ್ಯ ಆಸ್ಪತ್ರೆಯಾದ ನಾಸರ್ ಆಸ್ಪತ್ರೆಯ ಮೇಲೆ ಇಸ್ರೇಲ್ ವೈಮಾನಿಕ ದಾಳಿ ನಡೆಸಿದ್ದು, ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.