ಕರ್ನಾಟಕ ರಾಜ್ಯ ನಿರ್ಮಾಣ ಕೇಂದ್ರದ (ಕಾರ್ನಿಕ್) ನಿರ್ದೇಶಕ ಡಾ. ನಾರಾಯಣ ಗೌಡ ಕಾರ್ಕಳದ ಬೈಲೂರು ಪ್ರದೇಶದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ಗೆ ಸಂಬಂಧಿಸಿದಂತೆ ಪ್ರಸ್ತುತ ಬೆಳವಣಿಗೆಗಳನ್ನು ಪರಿಶೀಲಿಸಲು ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದರು.
ವೈಕುಂಠ ದ್ವಾರ ದರ್ಶನಕ್ಕೆ ಟಿಕೆಟ್ ಪಡೆಯಲು ತಿರುಪತಿಯ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಬೆಳಗ್ಗೆಯಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತಿದ್ದರು ಆದರೆ ಜನರ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ.
ಈ ಯೋಜನೆಯಡಿ ಅಪಘಾತ ಸಂಭವಿಸಿದ 24 ಗಂಟೆಯೊಳಗೆ ಪೊಲೀಸರಿಗೆ ಮಾಹಿತಿ ನೀಡಿದರೆ, ಏಳು ದಿನಗಳ ಕಾಲ ಸಂತ್ರಸ್ತರ ಚಿಕಿತ್ಸೆಗೆ ಗರಿಷ್ಠ ₹1.5 ಲಕ್ಷ ವೆಚ್ಚ ಭರಿಸುವುದಾಗಿ ಸರ್ಕಾರ ಘೋಷಿಸಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.
ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ.