ತಮ್ಮ ವಿವಾದಿತ ಹೇಳಿಕೆಯ ಕುರಿತು ಕ್ಷಮೆ ಕೇಳದೇ ಇದ್ದರೆ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಪ್ರಕಟಿಸಿದೆ.
ಕನ್ನಡ ಭಾಷೆಯ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ನಟ ಕಮಲ್ ಹಾಸನ್ ವಿರುದ್ಧ ಕರ್ನಾಟಕದ ಕನ್ನಡಿಗರಲ್ಲಿ ಆಕ್ರೋಶದ ಜ್ವಾಲೆ ಹೊತ್ತಿಕೊಂಡಿದ್ದು, ಈ ಪರಿಣಾಮವಾಗಿ ಅವರ ನಟನೆಯ 'ಥಗ್ ಲೈಫ್' ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೊಳ್ಳುವ ಬಗ್ಗೆ ಗಂಭೀರ ಅನುಮಾನ ಎದುರಾಗಿದೆ.