ಭಾರತದಲ್ಲಿ ಗ್ರಂಥಾಲಯ ವಿಜ್ಞಾನದ ಪಿತಾಮಹ ಎಂದು ಪರಿಗಣಿಸಲ್ಪಟ್ಟಿರುವ ಡಾ. ಎಸ್. ಆರ್. ರಂಗನಾಥನ್ ಅವರ ಜನ್ಮದಿನವಾದ ಆಗಸ್ಟ್ 12 ಅನ್ನು ರಾಷ್ಟ್ರೀಯ ಗ್ರಂಥಪಾಲಕರ ದಿನವನ್ನಾಗಿ ಆಚರಿಸಲಾಗುತ್ತದೆ.
ಪ್ರತಿ ವರ್ಷ ಆಗಸ್ಟ್ 10ರಂದು ವಿಶ್ವ ಜೈವಿಕ ಇಂಧನ ದಿನ (World Biofuel Day) ವನ್ನು ಆಚರಿಸಲಾಗುತ್ತದೆ. ಪೆಟ್ರೋಲಿಯಂ ಮೂಲದ ಇಂಧನಗಳ ಬಳಕೆಯನ್ನು ಕಡಿಮೆ ಮಾಡಿ, ಪರಿಸರ ಸ್ನೇಹಿ ಮತ್ತು ನವೀಕರಿಸಬಹುದಾದ ಇಂಧನಗಳ ಬಗ್ಗೆ ಅರಿವು ಮೂಡಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ