ಶ್ರೀಕ್ಷೇತ್ರ ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಸರ್ವಾಂಗೀಣ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಜಾ ಎಸ್. ಗಿರಿ ಆಚಾರ್ಯ ಅವರನ್ನು ಪರ್ಯಾಯ ಶ್ರೀಪುತ್ತಿಗೆ ಮಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಶ್ರೀಕೃಷ್ಣಗೀತಾನುಗ್ರಹ ಪ್ರಶಸ್ತಿಯೊಂದಿಗೆ ಸನ್ಮಾನಿಸಿ ಗೌರವಿಸಿದರು.
ಜಗದ್ಗುರು ಶ್ರೀಮದಾಚಾರ್ಯರ ಕರಾರ್ಚಿತವಾಗಿ ಶ್ರೀಪಲಿಮಾರುಮಠದ ಪರಂಪರೆಗೆ ದೊರೆತ ಶ್ರೀ ಸೀತಾ ಲಕ್ಷ್ಮಣಾಂಜನೇಯ ಸಮೇತ ಕೋದಂಡಪಾಣಿ ಶ್ರೀರಾಮಚಂದ್ರ ದೇವರಿಗಾಗಿ ಸುವರ್ಣ ಮಂಟಪ ನಿರ್ಮಾಣಕ್ಕೆ ಮಹತ್ವಾಕಾಂಕ್ಷಿ ಯೋಜನೆ ಕೈಗೊಳ್ಳಲಾಗಿದೆ.
ಕೊಡವೂರು ಗ್ರಾಮದ ಮೂಡುಬೆಟ್ಟು-ಮಧ್ವನಗರದಲ್ಲಿ ಎಲ್ಲರ ಒಗ್ಗೂಡುವಿಕೆಯಿಂದ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ನಿರ್ಮಾಣಕ್ಕೆ ನಾಂದಿ ಹಾಡಿರುವುದು ಅತ್ಯಂತ ಸಂತೋಷದ ವಿಚಾರ ಎಂದು ಕೊಡವೂರು ಶ್ರೀ ಶಿರ್ಡಿ ಸಾಯಿಬಾಬಾ ಮಂದಿರದ ಧರ್ಮದರ್ಶಿ ಕೆ.ದಿವಾಕರ ಶೆಟ್ಟಿ ತೋಟದಮನೆ ಹೇಳಿದರು.