ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಕಾರ್ಕಳ ತಾಲೂಕು ಬೈಲೂರು ವಲಯದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಯರ್ಲಪಾಡಿ ಬೈಲೂರು ಇದರ ಆಶ್ರಯದಲ್ಲಿ ನಡೆಯುವ 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಕೌಡೂರು ಮಾರಿಯಮ್ಮ ಸಭಾಭವನದಲ್ಲಿ ಹಮ್ಮಿಕೊಳ್ಳಲಾಯಿತು.
ಸುಮಾರು ಎಂಟು ಶತಮಾನಗಳಿಂದ ದ್ವೈತ ತತ್ವದ ಬೆಳಕನ್ನು ವಿಶ್ವಕ್ಕೆ ನೀಡಿದ ಆಚಾರ್ಯ ಮಧ್ವಕರಾರ್ಚಿತ ಉಡುಪಿ ಶ್ರೀಕೃಷ್ಣನ ಉಡುಪಿಯ ಕೃಷ್ಣಮಠದ ಪ್ರಾಚೀನ ಸೌಂದರ್ಯವನ್ನು ಆಧುನಿಕ ಬೆಳಕಿಂಡಿಯಲ್ಲಿ ದರ್ಶಿಸುವ ಅವಕಾಶವನ್ನು ಪರ್ಯಾಯ ಪುತ್ತಿಗೆ ಮಠಾಧೀಶ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಕಲ್ಪಿಸಿದ್ದು, ಕರಾವಳಿಯ ಮೂಲ ವಾಸ್ತುಶೈಲಿ ಮಾದರಿಯ ಕಾಷ್ಠ ಯಾಳಿ (ಸುತ್ತುಪೌಳಿ)ಯನ್ನು ಸುಮಾರು ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ.