ಮೊದಲ ಬಾರಿಗೆ ಸರ್ವಜ್ಞ ಪೀಠಾರೋಹಣ ಮಾಡಲಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪರ್ಯಾಯದ ಪೂರ್ವಭಾವಿ ಧಾರ್ಮಿಕ ವಿಧಿಯಾದ "ಕಟ್ಟಿಗೆ ಮುಹೂರ್ತವು" ಇಂದು ಉಡುಪಿ ಶ್ರೀಕೃಷ್ಣ ಮಠದ ಪರಿಸರದಲ್ಲಿ ವಿಜೃಂಭಣೆಯಿಂದ ನಡೆಯಿತು.
ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ₹7 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.
"ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮೋತ್ಥಾನ ಟ್ರಸ್ಟ್'' ಮುಖಾಂತರ ಪೂಜ್ಯರಾದ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನೀಡಿದ 5 ಲಕ್ಷ ರೂಪಾಯಿಯ ಮೊತ್ತದ ಡಿಡಿಯನ್ನು ಶ್ರೀ ಕಲ್ಲಮಠದ ಜೀರ್ಣೋದ್ಧಾರ ಸಮಿತಿಯವರಿಗೆ ಭಕ್ತಿಪೂರ್ವಕವಾಗಿ ಹಸ್ತಾಂತರಿಸಲಾಯಿತು.