ಮುದ್ರಾಡಿ ಎಂ. ಎನ್.ಡಿ. ಎಸ್. ಎಂ.ಅನುದಾನಿತ ಪ್ರೌಢಶಾಲೆಯ ಕಲ್ಪನಾ ಪರಿಸರ ಸಂಘ ಮತ್ತು ಹೆಬ್ರಿ ಅರಣ್ಯ ಇಲಾಖೆಯ ಜಂಟಿ ಸಹಯೋಗದಲ್ಲಿ ನಡೆದ "ಇಳೆಗೈಸಿರಿ" ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರತಿ ಮಗುವಿನ ಮನೆಗೊಂದು ಗಿಡವನ್ನು ವಿತರಿಸಲಾಯಿತು.
ಇತಿಹಾಸ ಪ್ರಸಿದ್ಧ ಪೆರ್ಡೂರು ಶ್ರೀ ಅನಂತ ಪದ್ಮನಾಭ ದೇವಸ್ಥಾನದ ಮೊದಲ ಹಂತದ ಜೀರ್ಣೋದ್ಧಾರ ಕಾರ್ಯದ ಅಂಗವಾಗಿ ₹7 ಕೋಟಿ ವೆಚ್ಚದಲ್ಲಿ ಭವ್ಯವಾಗಿ ನಿರ್ಮಾಣಗೊಳ್ಳಲಿರುವ ಶ್ರೀ ದೇವಳದ ನಗಾರಿ ಗೋಪುರದ ಶಿಲಾನ್ಯಾಸ ಸಮಾರಂಭವು ಜುಲೈ 13ರಂದು ಬೆಳಗ್ಗೆ 9 ಗಂಟೆಗೆ ನಡೆಯಲಿದೆ.