ಉಡುಪಿ ಜಿಲ್ಲಾ ಚಿತ್ರಕಲಾ ಶಿಕ್ಷಕರ ಸಂಘ (ರಿ), ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಉಡುಪಿ ಹಾಗೂ ಕರ್ನಾಟಕ ಪಬ್ಲಿಕ್ ಸ್ಕೂಲ್, ಹಿರಿಯಡ್ಕ (ಉಡುಪಿ ವಲಯ) ಇವುಗಳ ಸಂಯುಕ್ತ ಆಶ್ರಯದಲ್ಲಿ ಚಿತ್ರಕಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ - 2025 ಎಂಬ ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಕ್ರಮವು ಈ ತಿಂಗಳ 28ನೇ ತಾರೀಖು ಶನಿವಾರದಂದು ಬೆಳಿಗ್ಗೆ 10 ಗಂಟೆಗೆ ಹಿರಿಯಡ್ಕದ ಕರ್ನಾಟಕ ಪಬ್ಲಿಕ್ ಸ್ಕೂಲಿನಲ್ಲಿ ನಡೆಯಲಿದೆ.
ಹಿರಿಯಡ್ಕದ ಶ್ರೀ ವಿಶ್ವಕರ್ಮ ಸಮಾಜೋದ್ಧಾರಕ ಸಂಘ (ರಿ) ಕೊಂಡಾಡಿ, ಭಜನೆಕಟ್ಟೆಯಲ್ಲಿ ಹಿಂದುಸ್ಥಾನಿ ಸಂಗೀತ ಶಾಲೆಯ ಉದ್ಘಾಟನಾ ಕಾರ್ಯಕ್ರಮವು ಜೂನ್ 29, 2025ರಂದು ಬೆಳಿಗ್ಗೆ 9:30ಕ್ಕೆ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಬಿ.ಸಿ. ಟ್ರಸ್ಟ್ ಉಡುಪಿ ತಾಲೂಕಿನ ಹಿರಿಯಡ್ಕ ವಲಯ ಮತ್ತು ಪಂಚನಬೆಟ್ಟು ಖಾಸಗಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಹಭಾಗಿತ್ವದಲ್ಲಿ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಸಾರ್ವಜನಿಕರಿಂದ ಖರೀದಿಸಿ ತನ್ನ ಅಂಗಡಿಯಲ್ಲಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ವ್ಯಕ್ತಿಯನ್ನು ಹಿರಿಯಡ್ಕ ಪೊಲೀಸರು ಜೂನ್ 10ರಂದು ಬಂಧಿಸಿದ್ದಾರೆ.