ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ )ಬಿಸಿ ಟ್ರಸ್ಟ್ ಕಾರ್ಕಳ ಇದರ ಶೌರ್ಯ ವಿಪತ್ತು ನಿರ್ವಹಣಾ ಪಳ್ಳಿ ಘಟಕದ ವತಿಯಿಂದ "ಪರಿಸರ ಮಾಹಿತಿ ಮತ್ತು ಗಿಡ ನಾಟಿ" ಕಾರ್ಯಕ್ರಮವನ್ನು ಸರ್ಕಾರಿ ಪದವಿ ಪೂರ್ವ ಕಾಲೇಜು ಪಳ್ಳಿಯಲ್ಲಿ ನಡೆಸಲಾಯಿತು.
ಪೆರ್ವಾಜೆ ಸುಂದರ್ ಪುರಾಣಿಕ್ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತಾಲೂಕು ಆಡಳಿತದ ಆಶ್ರಯದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಗಳ ಪ್ರವೇಶಕ್ಕಾಗಿ ರಾಷ್ಟ್ರಮಟ್ಟದಲ್ಲಿ ನಡೆಸುವ ಐ.ಐ.ಎಸ್.ಇ.ಆರ್ ಪ್ರವೇಶ ಪರೀಕ್ಷೆಯ ಫಲಿತಾಂಶದಲ್ಲಿ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 7 ವಿದ್ಯಾರ್ಥಿಗಳಿಗೆ ಜನರಲ್ ಮೆರಿಟ್‌ನಲ್ಲಿ ಸಾವಿರದೊಳಗಿನ ರ‍್ಯಾಂಕ್ ಗಳು ಬಂದಿದ್ದು, ಸಂಸ್ಥೆಯ ವಿದ್ಯಾರ್ಥಿ ಸರ್ವಜಿತ್ ಜನರಲ್ ಮೆರಿಟ್ ವಿಭಾಗದಲ್ಲಿ 90ನೇ ರ‍್ಯಾಂಕ್ ತನ್ನದಾಗಿಸಿಕೊಂಡಿದ್ದಾರೆ.