ಕಾರ್ಕಳ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ವಿ. ಸುನಿಲ್ ಕುಮಾರ್ ಅವರು ಜೂನ್ 16 ರಂದು ಸೋಮವಾರ ಕಾರ್ಕಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿಗೆ ಭೇಟಿ ನೀಡಿ ಅಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ನಡೆಸಿ, ತಹಶೀಲ್ದಾರ್ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಕಣಂಜಾರು ಮತ್ತು ಶ್ರೀ ಬ್ರಹ್ಮಲಿಂಗೇಶ್ವರ ಚಾರಿಟೇಬಲ್ ಟ್ರಸ್ಟ್ ಅವರ ಸಹಯೋಗದಲ್ಲಿ ಜೂನ್ 15, 2025ರ ಭಾನುವಾರ, ಮಿಥುನ ಸಂಕ್ರಾಂತಿಯ ಪವಿತ್ರ ದಿನದಂದು 'ವಿಶ್ವ ಪರಿಸರ ದಿನಾಚರಣೆ' ಯ ಅಂಗವಾಗಿ "ಪರಿಸರ ಪೂಜನೆ" ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಶ್ರೀ ಕ್ಷೇತ್ರ ಕಣಂಜಾರಿನಲ್ಲಿ ಭಕ್ತಿ ಭಾವಪೂರ್ಣವಾಗಿ ಆಚರಿಸಲಾಯಿತು.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಲಾವತ್ತಡ್ಕ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದರೆ, ಇತರ ಕೆಲವರು ಗಾಯಗೊಂಡ ಘಟನೆ ನಡೆದಿದೆ.