ಉದ್ಯಮದಲ್ಲಿ ಆರ್ಥಿಕ ಸಂಕಷ್ಟ ಮತ್ತು ಆರೋಗ್ಯ ಸಮಸ್ಯೆಗಳಿಂದ ಕಂಗೆಟ್ಟ ಉದ್ಯಮಿಯೊಬ್ಬರು ಕಾರಿನೊಳಗೆ ವಿಷ ಸೇವಿಸಿ ನಂತರ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ದುಃಖದ ಘಟನೆ ಎ.29ರ ಮುಂಜಾನೆ ಕಾರ್ಕಳ ತಾಲೂಕಿನ ನಿಟ್ಟೆ ದೂಪದಕಟ್ಟೆಯಲ್ಲಿ ನಡೆದಿದೆ.
ಕಾರ್ಕಳದ ಇರ್ವತ್ತೂರು ಗ್ರಾಮ ಪಂಚಾಯತ್‌ನಲ್ಲಿ ಬೃಹತ್ ರಾಜೀನಾಮೆ ಅಲೆ ಕಾಣಿಸಿದೆ. ಬಿಜೆಪಿ ಬೆಂಬಲಿತ 7 ಸದಸ್ಯರಲ್ಲಿ ಉಪಾಧ್ಯಕ್ಷೆ ಸೇರಿದಂತೆ 6 ಜನ ಸದಸ್ಯರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಲೋಕಕಲ್ಯಾಣಕ್ಕಾಗಿ ಹೆಬ್ರಿ ಶ್ರೀ ಅನಂತಪದ್ಮನಾಭ ಪಾದಯಾತ್ರಾ ಸಮಿತಿಯ ವಿಪ್ರ ಬಾಂಧವರು ಹೆಬ್ರಿಯ ಅನಂತಪದ್ಮನಾಭ ದೇವಸ್ಥಾನದಿಂದ ನಾರಾವಿಯ ಶ್ರೀ ಸೂರ್ಯನಾರಾಯಣ ದೇವಸ್ಥಾನದವರೆಗೆ ಭಕ್ತಿ ಪಾದಯಾತ್ರೆ ನಡೆಸಿದರು.