ವಿಜೇತ ವಿಶೇಷ ಶಾಲೆಯಲ್ಲಿ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಕುಕ್ಕುಂದೂರು ಪಂಚಾಯತ್ ಸದಸ್ಯರಾದ ಶ್ರೀಮತಿ ಶಾಂತಿ ಕಿಣಿ ಇವರು ನೆರವೇರಿಸಿ ವಿದ್ಯಾರ್ಥಿಗಳಿಂದ ಗೌರವ ವಂದನೆ ಸ್ವೀಕರಿಸಿ,ಸಭಾ ಕಾರ್ಯಕ್ರಮದಲ್ಲಿ ಶುಭ ಹಾರೈಸಿದರು.
ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 13ರಂದು " ಕ್ರಿಯೇಟಿವ್ ಪುಸ್ತಕ ಧಾರೆ - 2025 " ಮುಂಗಾರಿನ ಹನಿಗಳ ಜೊತೆಗೆ ಪುಟಗಳ ಪಯಣ... ಕಾರ್ಯಕ್ರಮದಲ್ಲಿ ಕ್ರಿಯೇಟಿವ್ ಪುಸ್ತಕಮನೆ ಪ್ರಕಾಶನದ ವತಿಯಿಂದ 22 ಕೃತಿಗಳ ಅನಾವರಣ ಕಾರ್ಯಕ್ರಮ ನಡೆಯಿತು.
ಆಗಸ್ಟ್ 10ರಂದು ಶಿವಮೊಗ್ಗದಲ್ಲಿ ನಡೆದ 'ಶಿವಮೊಗ್ಗ ಓಪನ್ 6ನೇ ಅಂತಾರಾಷ್ಟ್ರೀಯ ಕರಾಟೆ ಸ್ಪರ್ಧಾಕೂಟ'ದಲ್ಲಿ ಮಲ್ಪೆ ಶ್ರೀ ನಾರಾಯಣಗುರು ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ತ್ವಿಷಾ ಕುಂದರ್ ಅವರು ಗಮನಾರ್ಹ ಸಾಧನೆ ಮಾಡಿದ್ದಾರೆ.