ಮಂಗಳೂರು ನಗರದಲ್ಲಿ ಡ್ರಗ್ಸ್ ದಂಧೆ ಮಟ್ಟಹಾಕಲು ಕಮಿಷನರ್ ಅನುಪಮ್ ಅಗರವಾಲ್ ಅವರು ನಡೆಸುತ್ತಿರುವ ನಿರಂತರ ಪ್ರಯತ್ನಗಳು ಫಲ ನೀಡಿದ್ದು, ಎಂಡಿಎಂಎ (MDMA) ಮಾರಾಟ ಮಾಡುತ್ತಿದ್ದ 8 ವಿದ್ಯಾರ್ಥಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಡಬ ತಾಲೂಕಿನ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ ಇಂದು (ಗುರುವಾರ, ಜುಲೈ 17) ಬೆಳಿಗ್ಗೆ ಹೆದ್ದಾರಿ ಬದಿಯ ಗುಡ್ಡ ಕುಸಿದು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣವಾಗಿ ಸ್ಥಗಿತಗೊಂಡಿದೆ.
ಮಂಗಳೂರು ನಗರಕ್ಕೆ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಒದಗಿಸುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು 'ಪ್ರಧಾನಮಂತ್ರಿ ಇ-ಬಸ್ ಸೇವಾ' ಯೋಜನೆಯಡಿ 100 ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಮಂಜೂರು ಮಾಡಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.