ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿರುವ ಪರಿಣಾಮ, ಧರ್ಮಸ್ಥಳದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸ್ನಾನಘಟ್ಟದಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಹೆಚ್ಚಿರುವ ಕಾರಣದಿಂದ, ಯಾತ್ರಾರ್ಥಿಗಳು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಕರಾವಳಿ ಪ್ರದೇಶದಲ್ಲಿ ಕೋಮು ಸಂಘರ್ಷ ತಡೆಯುವ ಉದ್ದೇಶದಿಂದ ರಚಿಸಲಾದ ವಿಶೇಷ ಕಾರ್ಯಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್)ಗೆ ಜೂನ್ 13 ರಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಅಧಿಕೃತವಾಗಿ ಚಾಲನೆ ನೀಡಿದರು.
ಹಿಂದೂ ಸಂಘಟನೆಗಳ ಒಕ್ಕೂಟವು ಜೂನ್ 6ರಂದು ಜಿಲ್ಲಾ ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಅವರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.