ದೇಶದಲ್ಲಿ ಸಂಚಲನ ಮೂಡಿಸಿರುವ ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಅವರು ವೀರೇಂದ್ರ ಹೆಗ್ಗಡೆಯವರಿಗೆ ತಮ್ಮ ಸಂಪೂರ್ಣ ಬೆಂಬಲ ಘೋಷಿಸಿದ್ದಾರೆ.
ಧರ್ಮ ಮತ್ತು ದೇವರ ವಿಷಯದಲ್ಲಿ ಜನರ ನಂಬಿಕೆಗಳಿಗೆ ಘಾಸಿ ಮಾಡುವ ಷಡ್ಯಂತ್ರವನ್ನು ದೇಶದ ಒಳಗೆ ಹಾಗೂ ಹೊರಗಿನ ಕೆಲವು ಶಕ್ತಿಗಳು ನಡೆಸುತ್ತಿವೆ ಎಂದು ಮಾಜಿ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತೀವ್ರವಾಗಿ ಟೀಕಿಸಿದ್ದಾರೆ.