ನಗರದ ಜಪ್ಪಿನಮೊಗರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ ಮದ್ಯಪಾನ ಹಾಗೂ ಅತೀವೇಗದ ಚಾಲನೆಯೇ ನೇರ ಕಾರಣವಾಗಿದೆ ಎಂಬುದನ್ನು ಮಂಗಳೂರು ನಗರ ಪೊಲೀಸರು ತಮ್ಮ ಪ್ರಾಥಮಿಕ ತನಿಖೆಯಲ್ಲಿ ದೃಢಪಡಿಸಿದ್ದಾರೆ.
ಮಂಗಳೂರಿನಲ್ಲಿ ಜಮೀನಿನ ಸಿಂಗಲ್ ಸೈಟ್ ನಕ್ಷೆ ಹಾಗೂ ಪ್ರಾಪರ್ಟಿ ಕಾರ್ಡ್ ಸಿದ್ಧಪಡಿಸುವ ಸಂದರ್ಭ ಲಂಚ ಸ್ವೀಕರಿಸುತ್ತಿದ್ದ ಸರ್ವೆಯರ್ ಮತ್ತು ದಲ್ಲಾಳಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿರುಸಿನ ಮಳೆ ಸುರಿಯುತ್ತಿರುವ ಪರಿಣಾಮ, ಧರ್ಮಸ್ಥಳದ ನೇತ್ರಾವತಿ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ನದಿಯ ಸ್ನಾನಘಟ್ಟದಲ್ಲಿ ನೀರಿನ ಹರಿವು ಅಪಾಯಕಾರಿಯಾಗಿ ಹೆಚ್ಚಿರುವ ಕಾರಣದಿಂದ, ಯಾತ್ರಾರ್ಥಿಗಳು ನದಿಗೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.