ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ನ ಗ್ಯಾಟ್ವಿಕ್ ವಿಮಾನ ನಿಲ್ದಾಣಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಗುರುವಾರ ದುರಂತಕ್ಕೀಡಾಗಿ, ಮೃತರ ಸಂಖ್ಯೆ 274 ಕ್ಕೆ ಏರಿದೆ.
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ಏರ್ ಇಂಡಿಯಾ ವಿಮಾನ ದುರಂತದ ನಂತರ 27 ಗಂಟೆಗಳ ಬಳಿಕ ಬ್ಲ್ಯಾಕ್ ಬಾಕ್ಸ್ (Black Box) ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.