ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿ ಬಿ ವಿಜಯೋತ್ಸವದಲ್ಲಿ ಅಪಾರ ಅಭಿಮಾನಿಗಳು ಭಾಗವಹಿಸಿದ ಪರಿಣಾಮ ಭೀಕರ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದ್ದು, 11 ಮಂದಿ ದುರಂತವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆ ದೇಶದಾದ್ಯಂತ ಆಘಾತ ಉಂಟುಮಾಡಿದ್ದು, ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಈ ಕುರಿತು ತೀವ್ರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಜೂನ್ 7 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ವಿವಿಧ ಮಹತ್ವದ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ ಮತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಐಪಿಎಲ್ ಇತಿಹಾಸದಲ್ಲಿ 18 ವರ್ಷಗಳ ಬಹುಕಾಲದ ನಿರೀಕ್ಷೆಗೆ ಕೊನೆ ಬಿದ್ದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮೊದಲ ಬಾರಿಗೆ ಇಂಡಿಯನ್ ಪ್ರೀಮಿಯರ್ ಲೀಗ್ ಚಾಂಪಿಯನ್ ಆಗುವ ಮೂಲಕ ಕೋಟ್ಯಾಂತರ ಅಭಿಮಾನಿಗಳ ಕನಸು ನನಸಾಗಿದೆ.
ತಮ್ಮ ವಿವಾದಿತ ಹೇಳಿಕೆಯ ಕುರಿತು ಕ್ಷಮೆ ಕೇಳದೇ ಇದ್ದರೆ ನಟ ಕಮಲ್ ಹಾಸನ್ ಅಭಿನಯದ ‘ಥಗ್ ಲೈಫ್’ ಸಿನಿಮಾ ರಾಜ್ಯದಲ್ಲಿ ಬಿಡುಗಡೆಗೆ ಅವಕಾಶವಿಲ್ಲ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ (KFCC) ಪ್ರಕಟಿಸಿದೆ.