ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ಗೆ 'ಪಾಕಿಸ್ತಾನಿ ಜೆಕೆ' ಎಂಬ ನಾಮದಿಂದ ಇಮೇಲ್ ಬಂದಿದ್ದು, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆಯುಳ್ಳ ಸಂದೇಶ ಕಳುಹಿಸಲಾಗಿದೆ.
ಅಕ್ರಮ ಗಣಿಗಾರಿಕೆಯ ಹಿನ್ನೆಲೆಯಲ್ಲಿರುವ ಓಬಳಾಪುರಂ ಮೈನಿಂಗ್ ಕಂಪನಿ (OMC) ಪ್ರಕರಣದಲ್ಲಿ, ಮಾಜಿ ಸಚಿವ ಮತ್ತು ಗಂಗಾವತಿಯ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಹೈದರಾಬಾದ್‌ನ ಸಿಬಿಐ ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಮಂಗಳವಾರ ತೀರ್ಪು ನೀಡಿದೆ.
‘ಆಪರೇಷನ್ ಸಿಂಧೂರ್’ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಭದ್ರತಾ ಸನ್ನಾಹವನ್ನು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಭಾರತದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳಲ್ಲಿನ ನಾಗರಿಕ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
ಪಹಲ್ಗಾಮ್‌ನಲ್ಲಿ ಭಾರತೀಯ ಯೋಧರ ಮೇಲೆ ನಡೆದ ಉಗ್ರರ ಹತ್ಯಾಕಾಂಡಕ್ಕೆ ತೀರಾ ತೀಕ್ಷ್ಣ ಪ್ರತೀಕಾರವಾಗಿ ಭಾರತೀಯ ಸೇನೆ "ಆಪರೇಷನ್ ಸಿಂಧೂರ್" ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ.