‘ಆಪರೇಷನ್ ಸಿಂಧೂರ್’ ಹಿನ್ನಲೆಯಲ್ಲಿ ಗಡಿಭಾಗದಲ್ಲಿ ಭದ್ರತಾ ಸನ್ನಾಹವನ್ನು ಹೆಚ್ಚಿಸಲಾಗಿದೆ. ಇದರ ಪರಿಣಾಮವಾಗಿ ಭಾರತದ ಉತ್ತರ ಭಾಗದ ಹಲವಾರು ವಿಮಾನ ನಿಲ್ದಾಣಗಳಲ್ಲಿನ ನಾಗರಿಕ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿದೆ.
ಪಹಲ್ಗಾಮ್ನಲ್ಲಿ ಭಾರತೀಯ ಯೋಧರ ಮೇಲೆ ನಡೆದ ಉಗ್ರರ ಹತ್ಯಾಕಾಂಡಕ್ಕೆ ತೀರಾ ತೀಕ್ಷ್ಣ ಪ್ರತೀಕಾರವಾಗಿ ಭಾರತೀಯ ಸೇನೆ "ಆಪರೇಷನ್ ಸಿಂಧೂರ್" ಹೆಸರಿನಲ್ಲಿ ಪಾಕಿಸ್ತಾನದ ಉಗ್ರ ನೆಲೆಗಳನ್ನು ಗುರಿಯಾಗಿಸಿಕೊಂಡು ಕ್ಷಿಪಣಿ ದಾಳಿ ನಡೆಸಿದೆ.
ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಭಾರಿ ಪರಿಣಾಮ ಉಂಟುಮಾಡಿದ್ದು, ಲಷ್ಕರ್ ಎ ತೊಯ್ಬಾ ಮತ್ತು ಜೈಶ್ ಎ ಮೊಹಮ್ಮದ್ ಸಂಘಟನೆಗಳ ಪ್ರಮುಖ ಉಗ್ರರು ಸೇರಿ ಹಲವರು ಹತರಾಗಿದ್ದಾರೆ ಎನ್ನಲಾಗಿದೆ.
ಏಪ್ರಿಲ್ 22ರಂದು ಜಮ್ಮು-ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯಂಕರ ಉಗ್ರ ದಾಳಿಯ ಪ್ರತೀಕಾರವಾಗಿ ಭಾರತೀಯ ಸೇನೆಯು ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರ (PoK) ಮತ್ತು ಪಾಕಿಸ್ತಾನದ ಒಳನಾಡಿನ ಉಗ್ರ ನೆಲೆಗಳ ಮೇಲೆ ಸ್ಪೋಟಕ-ಸಜ್ಜುಡಿದ ಡ್ರೋನ್ಗಳು ಮತ್ತು ನಿಖರ ಕ್ಷಿಪಣಿ ದಾಳಿ ನಡೆಸಿದೆ. 'ಆಪರೇಷನ್ ಸಿಂಧೂರ್' ಎಂಬ ಹೆಸರಿನ ಈ ಕಾರ್ಯಾಚರಣೆಯಲ್ಲಿ ಕೋಟ್ಲಿ, ಬಹ್ವಲ್ಪುರ್, ಮುಜಫರಾಬಾದ್ ಮತ್ತು ಮುರಿಡ್ಕೆ ಪ್ರದೇಶಗಳಲ್ಲಿರುವ ಒಟ್ಟು 9 ಉಗ್ರ ಅಡಗುತಾಣಗಳನ್ನು ಸಂಪೂರ್ಣವಾಗಿ ನಾಶಪಡಿಸಲಾಗಿದೆ.