ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭೀಕರ ಉಗ್ರ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಬಲಿಯಾಗಿದ್ದು, ಈ ಅಮಾನವೀಯ ಕೃತ್ಯದ ಬೆನ್ನಲ್ಲೇ ಕೇಂದ್ರ ಸರ್ಕಾರ ತೀವ್ರ ನಿರ್ಧಾರಗಳನ್ನು ಕೈಗೊಂಡಿದೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಪ್ರದೇಶದ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿ ದೇಶದಾದ್ಯಂತ ಆಕ್ರೋಶವನ್ನು ಉಂಟುಮಾಡಿದ್ದು, ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಈ ಕುರಿತು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ.