ಈ ಹಿಂದೆ ಕಾರ್ಕಳದ ಜನತೆಗೆ ಪಂಚಾಯಿತಿಯಿಂದ ಕೇವಲ ₹2000ಕ್ಕೆ ದೊರೆಯುತ್ತಿದ್ದ ಏಕ ವಿನ್ಯಾಸ ನಕ್ಷೆ ಪರವಾನಿಗೆ ಇದೀಗ ಕಾಪು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೋಗಿದ್ದು ₹20,000ಕ್ಕೂ ಹೆಚ್ಚು ವೆಚ್ಚವಾಗುವಂತಾಗಿದೆ.
ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ - ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.