ಶಿವಮೊಗ್ಗ ಜಿಲ್ಲೆಯ ಸಿಗಂದೂರಿನ ಹೊಳೆಬಾಗಿಲಿನಲ್ಲಿ ನದೀ ದಾಟುವ ಲಾಂಚ್‌ನ ಸ್ಟೀರಿಂಗ್ ಜಾಮ್ ಆದ ಪರಿಣಾಮ, ನೂರಾರು ಪ್ರಯಾಣಿಕರು ಹಾಗೂ ವಾಹನಗಳು ಕೆಲಕಾಲ ನದಿಯಲ್ಲಿ ಅತೀವ ಆತಂಕದ ವಾತಾವರಣವನ್ನು ಅನುಭವಿಸಿದ ಘಟನೆ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಬೆಳಗಾವಿಯಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಸಾರ್ವಜನಿಕವಾಗಿ ಅವಮಾನಕ್ಕೊಳಗಾದ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ, ತೀವ್ರ ಅಸಹನೆ ವ್ಯಕ್ತಪಡಿಸಿ ಸ್ವಯಂ ನಿವೃತ್ತಿಗೆ ಮನವಿ ಸಲ್ಲಿಸಿದ ಪ್ರಕರಣ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
ರಾಕಿಂಗ್ ಸ್ಟಾರ್ ಯಶ್ ತಾಯಿ ಪುಷ್ಪ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಟ್ರೋಲ್‌ಗೆ ತುತ್ತಾಗಿದ್ದಾರೆ. ನಟನ ತಾಯಿ ಎಂಬ ಕಾರಣಕ್ಕಲ್ಲ, ಅವರು ಹೊಸ ಸಿನಿಮಾ ನಿರ್ಮಾಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಶೈಲಿಯೇ ಈ ಟ್ರೋಲ್‌ಗಳಿಗೆ ಕಾರಣವಾಗಿದೆ.
ಸಿದ್ದರಾಮಯ್ಯನವರ ಸಿಎಂ ಹುದ್ದೆಗೆ ಬೆಂಬಲ ಸೂಚಿಸಿರುವ ಡಿಕೆ ಶಿವಕುಮಾರ್ ತಮ್ಮ ಬೆಂಬಲಿಗರಿಗೂ “ಸಿದ್ದರಾಮಯ್ಯ ಸಿಎಂ ಆಗಿದ್ದಾರೆ, ಯಾರೂ ಅಪಸ್ವರ ಎತ್ತಬೇಡಿ.” ಎಂದು ಕಿವಿಮಾತು ನೀಡಿದ್ದಾರೆ.
ನವವಿವಾಹಿತೆಯೊಬ್ಬರ ಶವ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ರೈಲ್ವೆ ಹಳಿ ಮೇಲೆ ಪತ್ತೆಯಾದ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ದಾವಣಗೆರೆ ಜಿಲ್ಲೆಯ ಅಣಜಿ ಗ್ರಾಮದ ವಿದ್ಯಾ (24) ಮೃತಪಟ್ಟ ದುರ್ದೈವಿ.