ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆರು ಮಂದಿ ಐಎಎಸ್ ಅಧಿಕಾರಿಗಳು, ನಾಲ್ಕು ಐಎಫ್‌ಎಸ್ ಅಧಿಕಾರಿಗಳು ಹಾಗೂ ಓರ್ವ ಐಪಿಎಸ್ ಅಧಿಕಾರಿ ಸೇರಿದಂತೆ ಒಟ್ಟು 11 ಹಿರಿಯ ಅಧಿಕಾರಿಗಳನ್ನು ವರ್ಗಾವಣೆ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಹೊಸ ಹುದ್ದೆಗಳನ್ನು ನಿಯೋಜಿಸಿದೆ.
ಅನಾಮಿಕ ವ್ಯಕ್ತಿ ಗುರುತಿಸಿದ ನಾಲ್ಕನೇ ಸ್ಥಳದಲ್ಲಿನ ಅಗೆಯುವ ಕಾರ್ಯಾಚರಣೆಯನ್ನು ವೀಕ್ಷಿಸಲು ಎಸ್‌ಐಟಿ (ವಿಶೇಷ ತನಿಖಾ ದಳ) ಮುಖ್ಯಸ್ಥ ಡಾ. ಪ್ರಣಬ್ ಮೊಹಾಂತಿ ಅವರು ತನಿಖಾಧಿಕಾರಿಗಳಾದ ಅನುಚೇತ್ ಮತ್ತು ಎಸ್‌ಪಿ ಸಿ.ಎ. ಸೈಮನ್ ಅವರೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಧರ್ಮಸ್ಥಳದ ಅರಣ್ಯ ಪ್ರದೇಶದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಅನಾಮಿಕ ಗುರುತಿಸಿದ 13 ಸ್ಥಳಗಳ ಪೈಕಿ 3ನೇ ಸ್ಥಳದಲ್ಲಿಯೂ ಯಾವುದೇ ಕಳೇಬರ ಪತ್ತೆಯಾಗದಿರುವುದು ಎಸ್‌ಐಟಿ (Special Investigation Team) ಅಧಿಕಾರಿಗಳಿಗೆ ತೀವ್ರ ತಲೆನೋವಾಗಿ ಪರಿಣಮಿಸಿದೆ.