ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರಾಗಿ ನೆಲ್ಯಾಡಿಯ ಹಿರಿಯ ಕಾಂಗ್ರೆಸ್ ನಾಯಕಿ, ತಾಲ್ಲೂಕು ಪಂಚಾಯತ್ ಮಾಜಿ ಸದಸ್ಯೆ ಹಾಗೂ ಪ್ರಸ್ತುತ ದ.ಕ. ಜಿಲ್ಲಾ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಉಷಾ ಅಂಚನ್ ಅವರನ್ನು ನೇಮಕ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡುತ್ತಿದ್ದಾಗ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಬೆಂಬಲಿಗರು ಸತತವಾಗಿ ಘೋಷಣೆಗಳನ್ನು ಕೂಗಿದ್ದರಿಂದ ಮುಖ್ಯಮಂತ್ರಿಗಳು ತೀವ್ರ ಅಸಮಾಧಾನಗೊಂಡರು.
ಭಾರತದ ಅಪ್ರತಿಮ ಶೌರ್ಯ ಮತ್ತು ತ್ಯಾಗವನ್ನು ಸಾರುವ ಕಾರ್ಗಿಲ್ ವಿಜಯ ದಿವಸವನ್ನು ಮುದ್ರಾಡಿಯ ಎಂ.ಎನ್.ಡಿ.ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ ಇಂದು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು