ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಶುಕ್ರವಾರ ಶೃಂಗೇರಿ ಶಾರದಾ ಪೀಠಕ್ಕೆ ಭೇಟಿ ನೀಡಿ, ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದರು. ಅವರು ಕುಟುಂಬ ಸಮೇತರಾಗಿ ಶೃಂಗೇರಿಗೆ ಆಗಮಿಸಿದ್ದು, ಜಗದ್ಗುರುಗಳ ಆಶೀರ್ವಾದವೂ ಪಡೆದರು.
ಕೇಂದ್ರ ವಿದೇಶಾಂಗ ಸಚಿವಾಲಯ ತನ್ನ ಅಮೆರಿಕ ಪ್ರವಾಸಕ್ಕೆ ಅನುಮತಿ ನಿರಾಕರಿಸಿರುವುದನ್ನು ತೀವ್ರವಾಗಿ ವಿರೋಧಿಸಿದ ಐಟಿ-ಬಿಟಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, “ನನ್ನ ಹೆಸರಿದ್ದರೆ ಅನುಮತಿ ಸಿಗದು, ಇಲ್ಲದಿದ್ದರೆ ಸಿಗುತ್ತದೆಯೆಂದರೆ ಇದನ್ನು ರಾಜಕೀಯವಲ್ಲದೆ ಇನ್ನೇನು?” ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
'ಕಾಂತಾರ: ದ ಲೆಜೆಂಡ್ ಪಾರ್ಟ್ 1' ಚಿತ್ರಕ್ಕಾಗಿ ಶೂಟಿಂಗ್ ಸೆಟ್ ಆಗಿ ನಿರ್ಮಿಸಲಾಗಿದ್ದ ಹಡಗಿನ ಆಕೃತಿಯ ವಿನ್ಯಾಸಾತ್ಮಕ ರಚನೆ ಜೂನ್ 14ರ ಸಂಜೆ ಸುರಿದ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದ ಸ್ವಲ್ಪ ಮಟ್ಟಿಗೆ ವಾಲಿದ್ದರೂ, ಯಾವುದೇ ಹಾನಿ ಅಥವಾ ಅಪಾಯ ಸಂಭವಿಸಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಸ್ಪಷ್ಟಪಡಿಸಿದೆ.