ಕೆಲಸದ ನಿಮಿತ್ತ ಬೈಕ್ ಸಮೇತ ನದಿಯನ್ನು ದಾಟುತ್ತಿದ್ದ ಇಬ್ಬರು ಯುವಕರು, ನದಿಯಲ್ಲಿ ಬೈಕ್ ಕೊಚ್ಚಿ ಹೋದರೂ ತಮ್ಮ ಚಾತುರ್ಯದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಹಿತ್ತಿಲಪೇಲ ಪ್ರದೇಶದಲ್ಲಿ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕುಮಟಾ ತಾಲೂಕಿನ ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು, ಶಿರಸಿ-ಕುಮಟಾ ರಸ್ತೆ ಮಾರ್ಗದಲ್ಲಿ ರಾತ್ರಿ ಸಮಯದಲ್ಲಿ ವಾಹನ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ವಿಧಿಸಲಾಗಿದೆ.