ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿ ಪ್ರದೇಶದಲ್ಲಿ ನಿರಂತರ ಭಾರೀ ಮಳೆಯ ಹಿನ್ನೆಲೆಯಲ್ಲಿ ಭೂ ಕುಸಿತ ಸಂಭವಿಸುವ ಅಪಾಯದ ಮುನ್ನೆಚ್ಚರಿಕಾ ಕ್ರಮವಾಗಿ, ಜಿಲ್ಲಾಡಳಿತವು ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ತಾತ್ಕಾಲಿಕ ನಿಷೇಧ ಹೇರಿದೆ.
ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ನಿಂದನೆ ಹಾಗೂ ಜಾತಿ ಆಧಾರಿತ ಟೀಕೆಗಳನ್ನು ಮಾಡಿದ್ದ ಹಿನ್ನೆಲೆಯಲ್ಲಿ ಕಾಸರಗೋಡು ಡೆಪ್ಯುಟಿ ತಹಶೀಲ್ದಾರ್ ಪವಿತ್ರನ್ ಅವರನ್ನು ಅಮಾನತು ಮಾಡಲಾಗಿದೆ.