ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜೈಪುರ ಗ್ರಾಮದಲ್ಲಿ ಜೂನ್ 11ರಂದು ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಯು ಉಡುಪಿ ಜಿಲ್ಲೆಯ ಬನ್ನಂಜೆ ಮೂಲದವರೆಂಬ ಶಂಕೆ ವ್ಯಕ್ತವಾಗಿದೆ.
ವಿಟ್ಲ ಪೊಲೀಸ್ ಠಾಣೆಯ ಪಿಎಸ್‌ಐ ವಿರುದ್ಧ ಜೂಜಾಟ ಪ್ರಕರಣವೊಂದನ್ನು ಮುಚ್ಚಿಹಾಕಲು ಲಂಚಕ್ಕೆ ಬೇಡಿಕೆ ಇಟ್ಟಿರುವ ಆಡಿಯೋ ವೈರಲ್ ಆದ ನಂತರ, ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಂಡಿದ್ದು, ಪಿಎಸ್‌ಐ ಕೌಶಿಕ್ ಬಿ.ಸಿ. ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.
ದೇವಿಯ ಅನುಗ್ರಹದ ಕನಸಿಗೆ ನೈಜ ರೂಪ ನೀಡಿದ ಭಕ್ತರು, ಸುಮಾರು ₹90 ಲಕ್ಷ ಮೌಲ್ಯದ ನವರತ್ನ ಕಲ್ಲುಗಳೊಂದಿಗೆ ಅಲಂಕೃತವಾದ 1 ಕೆ.ಜಿ ತೂಕದ ಚಿನ್ನದ ಮುಖವಾಡವನ್ನು ಬುಧವಾರ ಶ್ರೀ ಮೂಕಾಂಬಿಕಾ ದೇವಿಗೆ ಸಮರ್ಪಿಸಿದ್ದಾರೆ.
ವಿಧಾನಸೌಧದ ಮೆಟ್ಟಿಲುಗಳ ಮೇಲೆ ಜೂನ್ 4ರಂದು ನಡೆದ ಆರ್‌ಸಿಬಿ ಆಟಗಾರರ ಸನ್ಮಾನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದು ನಾನೇ ಎಂದು ಘೋಷಿಸಿದ್ದಾರೆ.