ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆ ನಡೆಸಿ ಈಗಾಗಲೇ ಸುಮಾರು 9-10 ವರ್ಷಗಳಾದ ಹಿನ್ನೆಲೆಯಲ್ಲಿ ಮತ್ತೆ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಘೋಷಿಸಿದ್ದಾರೆ.
ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಬಲಿಯಾದ ಹೆಬ್ರಿ ಮೂಲದ ಪ್ರತಿಭಾವಂತ ವಿದ್ಯಾರ್ಥಿನಿ ಚಿನ್ಮಯಿ ಶೆಟ್ಟಿ ಅವರ ಕುಟುಂಬಕ್ಕೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾ ಕುಮಾರಿ ಭೇಟಿ ನೀಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂಪಾಯಿಗಳ ಚೆಕ್ ಅನ್ನು ಚಿನ್ಮಯಿಯ ತಂದೆ ಕರುಣಾಕರ ಶೆಟ್ಟಿ ಅವರಿಗೆ ಮಂಗಳವಾರ ಹಸ್ತಾಂತರಿಸಲಾಯಿತು.
ಟ್ರೆಕ್ಕಿಂಗ್ ಮಾಡಲು ಬಂದ 10 ಮೆಡಿಕಲ್ ವಿದ್ಯಾರ್ಥಿಗಳು ದಟ್ಟ ಕಾಡಿನಲ್ಲಿ ದಾರಿ ತಪ್ಪಿ ನಿತ್ರಾಣಗೊಂಡಿದ್ದು, ಪೊಲೀಸರು ಮತ್ತು ಸ್ಥಳೀಯರ ಸಹಯೋಗದಿಂದ ರಾತ್ರಿ 2ಗಂಟೆಗೆ ಅವರನ್ನು ರಕ್ಷಿಸಲಾಗಿದೆ.