ಸಿ ಎಂ ಸಿದ್ದರಾಮಯ್ಯನವರು ಚಿನ್ನಸ್ವಾಮಿ ಕ್ರೀಡಾಂಗಣವನ್ನು ಭವಿಷ್ಯದಲ್ಲಿ ಸ್ಥಳಾಂತರಿಸುವ ಸಾಧ್ಯತೆಗಳನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಲಿದೆ ಎಂದು ಹೇಳಿದರು. ಕ್ರೀಡಾಂಗಣದ ಸ್ಥಳವನ್ನು ಹೆಚ್ಚು ಸುರಕ್ಷಿತ, ಯೋಜಿತ ಸ್ಥಳಕ್ಕೆ ಸ್ಥಳಾಂತರಿಸುವ ಬಗ್ಗೆ ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ತಿಳಿಸಿದರು.
ಮರವಂತೆ ಬೀಚ್‌ನಲ್ಲಿ ಪ್ರವಾಸಿಗರ ಸೆಲ್ಫಿ ಹುಚ್ಚಾಟ ಹಾಗೂ ಅಜಾಗ್ರತೆಯ ಪರಿಣಾಮವಾಗಿ ಐದು ಮಂದಿ ಸಮುದ್ರ ಪಾಲಾಗುವ ಹಂತಕ್ಕೆ ತಲುಪಿದ್ದರು. ಆದರೆ ಲೈಫ್ ಗಾರ್ಡ್‌ಗಳ ಸಮಯ ಪ್ರಜ್ಞೆ ಮತ್ತು ಸ್ಥಳೀಯರ ಸಹಕಾರದಿಂದ ಅವರನ್ನು ರಕ್ಷಿಸಲಾಯಿತು.