ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾನುವಾರ ಬೆಳಗಿನ ಜಾವ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪುಣ್ಯಸ್ನಾನಕ್ಕೆ ಕುಟುಂಬ ಸಮೇತ ಹೊರಟಿದ್ದಾರೆ.
ವಾಯುಪಡೆಯ ತರಬೇತಿ ವೇಳೆ ಪ್ಯಾರಾಚೂಟ್ ತೆರೆದುಕೊಳ್ಳದೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಮೂಲದ ವಾಯುಪಡೆಯ ವಾರಂಟ್ ಅಧಿಕಾರಿ ಮಂಜುನಾಥ್ ಜಿ.ಎಸ್ (36) ಅವರು ಉತ್ತರ ಪ್ರದೇಶದ ಆಗ್ರಾದಲ್ಲಿ ಪತನಗೊಂಡು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಯುವಕರ ಹಠಾತ್ ಸಾವಿನ ಪ್ರಮಾಣದ ಹೆಚ್ಚಳವನ್ನು ಗಮನಕ್ಕೆ ತಂದ ಹಿರಿಯ ಪತ್ರಕರ್ತ ರಾಜಾರಾಮ್ ತಲ್ಲೂರು ಅವರ ಪತ್ರದ ಮೇರೆಗೆ, ಸಿಎಂ ಸಿದ್ದರಾಮಯ್ಯ ಅವರು ಈ ಕುರಿತು ತನಿಖೆ ನಡೆಸಲು ತಜ್ಞರ ಸಮಿತಿಯನ್ನು ರಚಿಸಲು ಆದೇಶ ನೀಡಿದ್ದಾರೆ.