ಬೆಳಗಾವಿಯಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಪ್ಪು ಬಾವುಟ ತೋರಿಸಿ ಗದ್ದಲ ಸೃಷ್ಟಿಸಿದ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
"ಕಾಂಗ್ರೆಸ್ ಹಿಂದೂಗಳ ಪಕ್ಷವಲ್ಲ, ಅದು ಮುಸ್ಲಿಂ ಹಿತಕ್ಕಾಗಿ ಹುಟ್ಟಿದ ಪಕ್ಷ. ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಆಗಿದ್ದಾರೆ. ಅವರಿಗೆ ಪಾಕಿಸ್ತಾನಕ್ಕೆ ಹೋಗಿ ಪ್ರಧಾನಿಯಾಗಲು ಅವಕಾಶ ಕೊಡಬೇಕು," ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಭಾನುವಾರ ಭಾರೀ ವಾಗ್ದಾಳಿ ನಡೆಸಿದರು.