ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಆತಂಕ ವ್ಯಕ್ತಪಡಿಸಿರುವ ಶಾಸಕ ಎಚ್.ಡಿ. ರೇವಣ್ಣ, ಇದಕ್ಕೆ ಅತಿಯಾದ ಮದ್ಯಪಾನ ಮತ್ತು ಮಾಂಸಾಹಾರ ಸೇವನೆಯೇ ಪ್ರಮುಖ ಕಾರಣ ಎಂದು ಹೇಳಿದ್ದಾರೆ
ಮೈಸೂರು ತಾಲ್ಲೂಕಿನ ದಾಸನಕೊಪ್ಪಲು ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿದ್ದ 'ಹೈಟೆಕ್' ವೇಶ್ಯಾವಾಟಿಕೆ ದಂಧೆಯ ಮೇಲೆ ಪೊಲೀಸರು ದಾಳಿ ನಡೆಸಿ, 6 ಪುರುಷರು ಮತ್ತು ಇಬ್ಬರು ಯುವತಿಯರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಧಾನಮಂತ್ರಿ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠ ಮಧ್ಯಂತರ ತಡೆ ನೀಡಿದೆ.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ "ಅನ್ನಭಾಗ್ಯ" ಯೋಜನೆಯಡಿ ಆಹಾರಧಾನ್ಯ ಸಾಗಣೆಯಲ್ಲಿ ತೊಡಗಿರುವ ಲಾರಿ ಮಾಲಕರಿಗೆ ರಾಜ್ಯ ಸರ್ಕಾರ ಸುಮಾರು 250 ಕೋಟಿ ರೂ. ಬಾಕಿ ಉಳಿಸಿಕೊಂಡಿರುವುದರಿಂದ, ಸೋಮವಾರದಿಂದ (ಜುಲೈ 7, 2025) ಆಹಾರ ಧಾನ್ಯ ಸಾಗಾಣಿಕೆ ಲಾರಿಗಳ ಮುಷ್ಕರ ಆರಂಭವಾಗಿದೆ.
ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಮಹಿಳಾ ಗ್ರಾಹಕರ ಮೊಬೈಲ್ ಸಂಖ್ಯೆಗಳನ್ನು ದುರುಪಯೋಗಪಡಿಸಿಕೊಂಡು, ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿದ್ದ ಡೆಲಿವರಿ ಬಾಯ್ ನನ್ನು ಹುಬ್ಬಳ್ಳಿಯ ಗೋಕುಲ್ ರೋಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.